ಪ್ರವಾಸ ಕಥನ

ನೆಲ್ಲಿತೀರ್ಥ…ಎಂಬ ದೇವಸ್ಥಾನ

ಭಯಂಕರ ನಿದ್ದೆಯಲಿ ಕನಸು ಕಾಣುತ್ತಿದ್ದೆ .. ಒಮ್ಮಿಂದೊಮ್ಮೆಲೆ ಅಮ್ಮನ ಕರೆ..”ಏಳು ..ಈಗಲೇ ತಡವಾಗಿದೆ..”.. ಅಪ್ಪನ ಬಹು ದಿನದ ಯೋಜನೆಗೆ ಇಂದು(ಆದಿತ್ಯವಾರ) ತೆರೆ ಬೀಳುವ ಕ್ಷಣ.. “ನೆಲ್ಲಿ ತೀರ್ಥ ” ಎಂಬ ನೈಸರ್ಗಿಕವಾಗಿ ಬೆಳೆದ ಒಬ್ಬರ ಪರಿಶ್ರಮದ ತಾಣ(ದೇವಸ್ಥಾನ ).. ಪ್ರಯಾಣ ಶುರು ಮಾಡಲು ಸಜ್ಜಾದೆವು..ಅಪ್ಪ ಅಮ್ಮ , ಪಕ್ಕದ ಮನೆ ಆಂಟಿ ಮತ್ತೆ ನಮ್ಮ ಪರಿಚಯದ ಅತ್ತೆ ಮಾಮ ಮತ್ತು ಅವರ ಮಗನೊಂದಿಗೆ ನಮ್ಮ ಕಾರಿನಲ್ಲಿ ತಾಣದೆಡೆಗೆ ಚಲನ..
ಬೆಳಿಗ್ಗೆ ೧೧ ಘಂಟೆ. ಸುಂದರ ಪ್ರಶಾಂತವಾದ ನೆಲ್ಲಿತೀರ್ಥ ಪ್ರದೇಶಕ್ಕೆ ತಲುಪಿದೆವು.. ಸುಮಾರು ೬-೭ ಕಿಲೋ ಮೀಟರುಗಳಷ್ಟು ಹೆದ್ದಾರಿಯಿಂದ ದೂರದಲ್ಲಿರುವ ಸ್ಥಳ.. ಸ್ವಂತ ವಾಹನದ ಅವಶ್ಯಕತೆ… “ಸೋಮನಾಥೇಶ್ವರ ಗುಹಾಲಯ” ಕ್ಕೆ ಸ್ವಾಗತ ಎಂಬ ಬೋರ್ಡ್ ನಮ್ಮನ್ನು ಆಗಮನಕ್ಕೆ ಸಂತಸ ಸೂಚಿಸಿದವು.. ಭಟ್ಟರ ಆಣತಿಯಂತೆ ಸಮೀಪದಲ್ಲಿರುವ ಕೆರೆಯಲ್ಲಿ ಮೈ ಬಟ್ಟೆ ಒದ್ದೆ ಮಾಡಿ ಬಂದು ದೇವರ ಸನ್ನಿಧಾನದಲ್ಲಿ ಕೈ ಮುಗಿದು “ಗುಹಾ ಪ್ರವೇಶ” ಕ್ಕೆ ಸನ್ನದ್ಧರಾದೆವು.
Nelliteertha
ಮನದಲ್ಲಿ ಏನೋ ಭಯ, ಕಳವಳ ಮನೆ ಮಾಡಿಯಾಗಿತ್ತು..ಜೀವನದಲ್ಲಿ ಮೊದಲ ಬಾರಿಗೆ ಆಮ್ಲ ಜನಕದ ಕೊರತೆ ಇರುವ ಪ್ರದೇಶಕ್ಕೆ ಹೋಗಲು ಮನ ಸಿದ್ಧ ಮಾಡಿಯಾಗಿತ್ತು.. ಒದ್ದೆ ಬಟ್ಟೆಯಲ್ಲೇ ಕೈ ಮುಗಿದುಕೊಂಡು “ಗೋವಿಂದಾ ರಮಣ ಗೋವಿಂದ ಗೋವಿಂದ ” ಎನ್ನುತ್ತಾ ಸಾಲಾಗಿ ಸರತಿಯಂತೆ ಗುಹೆಯೊಳಗೆ ಪಾದಾರ್ಪಣೆ.. ತಣ್ಣನೆಯ ಅನುಭವ.. ಎಣ್ಣೆ ದೀಪ ಹೀದ ಒಬ್ಬ ಬಾಲಕ ನಮ್ಮ ದಾರಿ ಪಾಲಕ ಅಲ್ಲದೆ ದಾರಿ ತೋರುಕ.. ಮನದಲ್ಲಿ ಭಯ ಇನ್ನೂ ಜಾಸ್ತಿ ಆಗತೊಡಗಿತು.. ನಮ್ಮ ೭ ಜನರೊಟ್ಟಿಗೆ ಇಬ್ಬರು, ಗಂಡ ಹೆಂಡಿರು, ಮತ್ತೆ ೫೦ ರ ಆಸು ಪಾಸಿನ ಅಜ್ಜಿ ಜೊತೆಯಾದರು.. ಮನದಲ್ಲಿ ಭಕ್ತಿ ತುಂಬಿ ಬಾಯಲ್ಲಿ ಶಿವ ನಾಮ ಸ್ಮರಣೆ ಮಾಡುತ್ತಾ ಸಾಗಿದೆವು.. ಎದ್ದು ನಿಲ್ಲಲಾರದಂತ ಸಣ್ಣ ಗುಹೆ.. ಅಲ್ಲಲ್ಲಿ ಚಿಕ್ಕ ಎಣ್ಣೆ ದೀವಿಗೆಗಳು ನಮಗೆ ದಾರಿ ತೋರುತ್ತಿದ್ದವು.. ತೆವಳಿಕೊಂಡೇ ಮುಂದುವರಿಯಬೇಕಾದಂತ ಪರಿಸ್ಥಿತಿ.. ಎದ್ದು ನಿಂತರೆ ಮೊನಚಾದ ಕಲ್ಲುಗಳ ತಿವಿತ.. ಹರಿಯುತ್ತಿದ್ದ ನೀರಿನಲ್ಲಿ ತೆವಳಿ ಮುಂದೆ ಸಾಗುತ್ತಿದ್ದೆವು.. ಮನದಲ್ಲಿಯ ಭಾವ ” ಅರ್ಧ ದಾರಿಯಲ್ಲೇ ಉಸಿರಾಡಲು ತೊಂದರೆಯಾಗಿ ಹಿಂದಿರುಗಳೂ ಆಗದೆ ಹೋದರೆ ಏನು ಗತಿ ?” ಎಂದು ಯೋಚಿಸುತ್ತಿರುವಾಗಲೇ.. ಸ್ವಲ್ಪ ವಿಶಾಲವಾದ ಜಾಗ ಸಿಕ್ಕಿತು.. ಅಲ್ಲಿಯೇ ಉದ್ಭವ ಈಶ್ವರ ಲಿಂಗ ತಟಸ್ಥವಾಗಿ ನಿಂತಿದೆ.. ಭಕ್ತಿಯಲ್ಲಿ ಕೈ ಮುಗಿದು ಸುತ್ತಲು ಇದ್ದ ನೀರಿನಿಂದ ಈಶ್ವರ ಲಿಂಗಕ್ಕೆ ಜಲಾಭಿಷೇಕ ಮಾಡಿ ತೀರ್ಥವನ್ನು ತಲೆಗೆ ಸಿಂಪಡಿಸಿದೆವು. ಗೈಡ್ ನ ಮಾಹಿತಿಯಂತೆ ಅಲ್ಲಿ ಇದ್ದ ಮಣ್ಣಿನಿಂದ ದೇಹ ಲೇಪನ.. ಇದರ ಉದ್ದೇಶವೇನೆಂದರೆ ಚರ್ಮದ ಏನೇ ಕಾಯಿಲೆ ಇದ್ದರೂ ಅದನ್ನು ವಾಸಿ ಮಾಡಬಲ್ಲಂತ ಶಕ್ತಿ ಹೊಂದಿದೆ.. ಗುಹೆಯ ಚರಿತ್ರೆಯ ಪರಿಚಯ.. ಗುಹೆಯ ಒಳ ಭಾಗದಲ್ಲಿ “ನೆಲ್ಲಿಕಾಯಿ” ಯಂತ ಗಾತ್ರದ ನೀರು ಯಾವತ್ತೂ ಜಿನುಗುತ್ತಿರುತ್ತದೆ..ಇದುವೇ ಆ ಸ್ಥಳಕ್ಕೆ ಹೆಸರು (ನೆಲ್ಲಿ ತೀರ್ಥ) ಬರಲು ಕಾರಣ. ಸುಮಾರು ೨೦೦ ಮೀಟರ್ ಉದ್ದದ ಗುಹೆಯಿಂದ ವಾಪಸು ಬರಲು ಹೊರಟೆವು.. ತೆವಳಿಕೊಂಡೇ ಬರತೊಡಗಿದೆವು.. ಕೆಲವೇ ಕ್ಷಣದಲ್ಲಿ ಸೂರ್ಯನ ಪ್ರಕಾಶವು ನಮ್ಮನ್ನು ನೋಡಲಾರಂಬಿಸಿದವು.. ಪದ್ದತಿಯಂತೆ ಸ್ನಾನ ನಿಶಿದ್ದ .. ಒದ್ದೆ ಬಟ್ಟೆಯಲ್ಲಿ ಮೈ ಒರೆಸಿಕೊಂಡು ಬಟ್ಟೆ ಬದಲಾಯಿಸಿ ಸೋಮನಾಥೆಶ್ವರನ ಮಹಾಪೂಜೆಗೆ ಬೇಡಿ ನಿಂತೆವು.. ಆಗ ಸಮಯ ಸರಿಯಾಗಿ ಒಂದು ಗಂಟೆ.. ಮನಸ್ಸು ನಿರ್ಮಲವಾಗಿ ಕಲ್ಮಶಗಳೆಲ್ಲವೂ ಒಮ್ಮೆ ತಟಸ್ಥವಾದವು ..
ಪೂಜೆ ಮುಗಿಸಿ ಪ್ರಸಾದ ಭೋಜನ ಸ್ವೀಕರಿಸಿ ಬಹು ಸಂತಸದ ಅನುಭವದೊಂದಿಗೆ ತೆರಳಲು ಸಜ್ಜಾದೆವು..
ಅಲ್ಲಿಯ ಭಟ್ಟರ ಹೇಳಿಕೆಯಂತೆ ಮಧ್ಯಾನದ ನಂತರ ಯಾರನ್ನೂ ಗುಹೆಯ ಒಳಗಡೆ ಬಿಡುವುದಿಲ್ಲ.. ಆಗ ಸರಿಸೃಪಗಳ ಚಲನ ವಲನಗಳು.. ಒಮ್ಮೊಮ್ಮೆ ಗುಹೆಯಿಂದ ಹೊರಗೆ ಬರುವ ಸಾಧ್ಯತೆಗಳು ಇವೆಯಂತೆ.. ಇದನ್ನೆಲ್ಲಾ ಕೇಳಿ ಮೈ ಜುಮ್ ಎಂದಿತು.. ಆದರೆ ಗುಹೆಯ ಯಾತ್ರೆ ಮಾತ್ರ ಮನದಾಳದಿಂದ ಹೊರ ಎಸೆಯಲು ಸಾಧ್ಯವೇ ಇಲ್ಲ.. ಹೊಸ ಅನುಭವಗಳೊಂದಿಗೆ ನಮ್ಮ ನಮ್ಮಲ್ಲಿ ವಿನಿಮಯ ಮಾಡಿಕೊಳ್ಳುತ್ತ ಮನೆಗೆ ಹಿಂದಿರುಗಲು ಅಣಿಯಾದೆವು.. ನೆಲ್ಲಿ ತೀರ್ಥದಿಂದ ಸುಮಾರು ೧೦-೧೨ ಕಿಲೋ ಮೀಟೆರಗಳ ದೂರದಲ್ಲಿ ಅನಾನಸ್ ಫಾರ್ಮ್ ಹೌಸ್ ಇದೆ.. ಇದರ ಬಗ್ಗೆ ಜನರ ಒಳ್ಳೆ ಅಭಿಪ್ರಾಯ ಕೇಳಿ ಅದನ್ನು ಭೇಟಿ ಮಾಡಲು ಪ್ರಯಾಣ ಮುಂದುವರೆಸಿದೆವು.. ಅಪ್ಪಟ ಅನಾನಸ್ ರಸವು ಸಕ್ಕರೆ ಇಲ್ಲದೆ ಗಂಟಲಲ್ಲಿ ಇಳಿದಾಗ ಮನವು ತಂಪಾಯಿತು.. ಬಿಸಿಲಿನ ಧಗೆಗೆ ನೀರೆರೆಚಿದಂತಾಯಿತು..
ಎಲ್ಲಾ ಬಹು ಸುಂದರ ಅನುಭವಗಳೊಂದಿಗೆ, ಸೂರ್ಯನು ತನ್ನ ಮನೆಗೆ ತೆರಳಿದಂತೆ , ನಮ್ಮ ಮನೆಗಳಿಗೆ ನಾವೂ ತೆರಳಲು ಹೊರಟೆವು.. ನೆನಪುಗಳ ಮೂಟೆಯಲಿ… 🙂 🙂
“ನೆಲ್ಲಿ ತೀರ್ಥ ” ಎಂಬ ಸ್ಥಳದ ಕುರಿತ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ಕೊಡಿ.. http://www.nellitheertha.com/

Seema Burde

Facebook ಕಾಮೆಂಟ್ಸ್

ಲೇಖಕರ ಕುರಿತು

Guest Author

Joining hands in the journey of Readoo.in, the guest authors will render you stories on anything under the sun.

Subscribe To Our Newsletter

Join our mailing list to weekly receive the latest articles from our website

You have Successfully Subscribed!

ಸಾಮಾಜಿಕ ಜಾಲತಾಣಗಳಲ್ಲಿ ನಮನ್ನು ಬೆಂಬಲಿಸಿ!